Hosea 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
Kannada BSI Bible 2016
ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಫ್ರಾಯೀವಿುಗೆ ನುಸಿ, ಯೆಹೂದ ಕುಲಕ್ಕೆ ಕುಟ್ಟೆ.
Kannada Bible (KNCL) BSI 2016
ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.