Hosea 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.
Kannada BSI Bible 2016
ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.
Kannada Bible (KNCL) BSI 2016
ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.