Hosea 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.
Kannada BSI Bible 2016
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.
Kannada Bible (KNCL) BSI 2016
“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”