Hosea 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವಿ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.
Kannada BSI Bible 2016
ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲು ನನಗೆ ಮರೆಯಲ್ಲ; ಎಫ್ರಾಯೀಮೇ, ನೀನೀಗ ಸೂಳೆತನಮಾಡಿದ್ದೀ, ಇಸ್ರಾಯೇಲು ಹೊಲೆಯಾಗಿದೆ.
Kannada Bible (KNCL) BSI 2016
ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.