Hosea 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
Kannada BSI Bible 2016
ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ತಮ್ಮ ದನಕುರಿಗಳ ಸಂಗಡ ಯೆಹೋವನನ್ನು ಶರಣುಹೊಗಲು ಹೊರಡುವವು; ಆತನು ಸಿಕ್ಕನು, ಅವುಗಳ ಕಡೆಯಿಂದ ಮರೆಯಾಗಿದ್ದಾನೆ.
Kannada Bible (KNCL) BSI 2016
ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.