Hosea 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.
Kannada BSI Bible 2016
ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ ಅವುಗಳ ಭೂಸ್ವಾಸ್ತ್ಯಗಳನ್ನೂ ಈಗ ಈ ಮುಂದಿನ ತಿಂಗಳು ನುಂಗಿಬಿಡುವದು.
Kannada Bible (KNCL) BSI 2016
ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.