Hosea 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.
Kannada BSI Bible 2016
ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನೇ, ಹಿಂದೆ ನೋಡು! ಖಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.
Kannada Bible (KNCL) BSI 2016
ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮು ಗದರಿಸುವ ದಿವಸದಲ್ಲೇ ಹಾಳಾಗುವುದು. ಇಸ್ರಾಯೇಲಿನ ಗೋತ್ರಗಳಲ್ಲಿ ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.