Hosea 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
Kannada BSI Bible 2016
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
Kannada Bible (KNCL) BSI 2016
ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.