Hosea 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಇಸ್ರೇಲನ್ನು ಗುಣಪಡಿಸುವೆನು.ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
Kannada BSI Bible 2016
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
Kannada Bible (KNCL) BSI 2016
“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.