Hosea 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.
Kannada BSI Bible 2016
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;
Kannada Bible (KNCL) BSI 2016
ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.