Hosea 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.
Kannada BSI Bible 2016
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.
Kannada Bible (KNCL) BSI 2016
ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.