Hosea 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
Kannada BSI Bible 2016
ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
Kannada Bible (KNCL) BSI 2016
“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.