Hosea 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.
Kannada BSI Bible 2016
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.
Kannada Bible (KNCL) BSI 2016
ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.