Hosea 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
Kannada BSI Bible 2016
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
Kannada Bible (KNCL) BSI 2016
“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.