Hosea 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
Kannada BSI Bible 2016
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.
Kannada Bible (KNCL) BSI 2016
ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.