Hosea 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
Kannada BSI Bible 2016
ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ ಅವುಗಳು ತನಗೆ ಸಂಬಂಧಪಟ್ಟವುಗಳಲ್ಲವೆಂದು ಅದು ಭಾವಿಸುತ್ತದೆ.
Kannada Bible (KNCL) BSI 2016
ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.