Hosea 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
Kannada BSI Bible 2016
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.
Kannada Bible (KNCL) BSI 2016
ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.