Hosea 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”
Kannada BSI Bible 2016
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.
Kannada Bible (KNCL) BSI 2016
“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”

Recommended Reading