Hosea 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
Kannada BSI Bible 2016
ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.
Kannada Bible (KNCL) BSI 2016
ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”