Hosea 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
Kannada BSI Bible 2016
ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣವೂ ದ್ರಾಕ್ಷೆಯ ತೊಟ್ಟಿಯೂ ನಿನ್ನ ಜನರಿಗೆ ಜೀವನವಾಗವು; ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿಹೋಗುವದು.
Kannada Bible (KNCL) BSI 2016
ಸುಗ್ಗಿಯ ಕಣವೂ ದ್ರಾಕ್ಷಾರಸದ ತೊಟ್ಟಿಯೂ ನಿನ್ನ ಜನರಿಗೆ ಜೀವನಾಧಾರವಾಗವು. ಹೊಸದ್ರಾಕ್ಷಾರಸದ ನಿರೀಕ್ಷೆ ಅವರನ್ನು ನಿರಾಶೆಗೊಳಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು.