Hosea 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
Kannada BSI Bible 2016
ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.
Kannada Bible (KNCL) BSI 2016
ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.