Isaiah 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
Kannada BSI Bible 2016
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.
Kannada Bible (KNCL) BSI 2016
ಸ್ವಾಮಿ ಇಂತೆನ್ನುತ್ತಾರೆ: “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.