Isaiah 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
Kannada BSI Bible 2016
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.
Kannada Bible (KNCL) BSI 2016
ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.