Isaiah 1:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೆ ಒಣಗಿಹೋದ ಏಲಾ ಮರಗಳಂತೆ ನೀವು ಇದ್ದೀರಿ. ನೀರಿಲ್ಲದೆ ಸಾಯುತ್ತಿರುವ ಉದ್ಯಾನವನದಂತೆ ನೀವು ಇದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
Kannada BSI Bible 2016
ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೆ ಒಣಗಿದ ಏಲಾಮರದಂತೆಯೂ ಜಲವಿಲ್ಲದ ವನದ ಹಾಗೂ ಇರುವಿರಿ.
Kannada Bible (KNCL) BSI 2016
ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.