Isaiah 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
Kannada BSI Bible 2016
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.
Kannada Bible (KNCL) BSI 2016
ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.