Isaiah 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
Kannada BSI Bible 2016
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.