Isaiah 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
Kannada BSI Bible 2016
ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.
Kannada Bible (KNCL) BSI 2016
ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”