Isaiah 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
Kannada BSI Bible 2016
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;
Kannada Bible (KNCL) BSI 2016
ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.