Isaiah 10:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
Kannada BSI Bible 2016
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
Kannada Bible (KNCL) BSI 2016
ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!