Isaiah 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
Kannada BSI Bible 2016
ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.
Kannada Bible (KNCL) BSI 2016
ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.

Recommended Reading