Isaiah 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
Kannada BSI Bible 2016
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.
Kannada Bible (KNCL) BSI 2016
ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.