Isaiah 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Kannada BSI Bible 2016
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.
Kannada Bible (KNCL) BSI 2016
ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.