Isaiah 10:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
Kannada BSI Bible 2016
ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.
Kannada Bible (KNCL) BSI 2016
ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.