Isaiah 10:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
Kannada BSI Bible 2016
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ಕತ್ತಿನಿಂದಲೂ ತೊಲಗುವವು; ನೀವು ಪುಷ್ಟರಾದ ಕಾರಣ ನೊಗವು ಮುರಿದು ಹೋಗುವದು.
Kannada Bible (KNCL) BSI 2016
ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.