Isaiah 10:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
Kannada BSI Bible 2016
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ದಿವಸ [ಶತ್ರುಗಳು] ನೋಬಿನಲ್ಲಿ ಬೀಡುಗೊಳ್ಳುವರು; ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇವಿುನ ಬೆಟ್ಟದ ಕಡೆಗೆ, ಕೈ ಬೀಸುತ್ತಾರೆ.
Kannada Bible (KNCL) BSI 2016
ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.