Isaiah 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
Kannada BSI Bible 2016
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
Kannada Bible (KNCL) BSI 2016
ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.