Isaiah 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ಜಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
Kannada BSI Bible 2016
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.
Kannada Bible (KNCL) BSI 2016
ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.