Isaiah 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
Kannada BSI Bible 2016
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.
Kannada Bible (KNCL) BSI 2016
ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.