Isaiah 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
Kannada BSI Bible 2016
ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.
Kannada Bible (KNCL) BSI 2016
ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.