Isaiah 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
Kannada BSI Bible 2016
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.
Kannada Bible (KNCL) BSI 2016
ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.