Isaiah 11:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
Kannada BSI Bible 2016
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.
Kannada Bible (KNCL) BSI 2016
ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.