Isaiah 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
Kannada BSI Bible 2016
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.
Kannada Bible (KNCL) BSI 2016
ಆ ದಿನದಂದು ಹಾಡುವುದು ಜನತೆ ಹೀಗೆಂದು: “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?