Isaiah 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
Kannada BSI Bible 2016
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.
Kannada Bible (KNCL) BSI 2016
ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”