Isaiah 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
Kannada BSI Bible 2016
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.
Kannada Bible (KNCL) BSI 2016
ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”