Isaiah 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Kannada BSI Bible 2016
ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡದ ಕುರಿಗಳ ಹಾಗೂ ಪ್ರತಿಯೊಬ್ಬನು ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Kannada Bible (KNCL) BSI 2016
“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.