Isaiah 13:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
Kannada BSI Bible 2016
ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಕ್ಕಿಸಿಕ್ಕಿದವರೆಲ್ಲಾ ಇರಿಯಲ್ಪಡುವರು, ಅಟ್ಟಿ ಹಿಡಿಯಲ್ಪಟ್ಟ ಸಕಲರೂ ಕತ್ತಿಗೆ ತುತ್ತಾಗುವರು.
Kannada Bible (KNCL) BSI 2016
ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.