Isaiah 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
Kannada BSI Bible 2016
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.
Kannada Bible (KNCL) BSI 2016
“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.