Isaiah 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
Kannada BSI Bible 2016
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.
Kannada Bible (KNCL) BSI 2016
ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.