Isaiah 13:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
Kannada BSI Bible 2016
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.
Kannada Bible (KNCL) BSI 2016
ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.