Isaiah 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.
Kannada BSI Bible 2016
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.
Kannada Bible (KNCL) BSI 2016
ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.